ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಿಂದ ಬೆಳಿಗ್ಗೆ ಮಂಗಳೂರಿಗೆ ಮತ್ತು ಮಂಗಳೂರಿನಿಂದ ಸಂಜೆ ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್‌ಗೆ ಪ್ಯಾಸೆಂಜರ್ ರೈಲು ಸೇವೆ ಆರಂಭಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದಾರೆ.
ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾಣಿಯೂರು, ಎಡಮಂಗಲ, ಕೋಡಿಂಬಾಲ ಬಜಕೆರೆ ಭಾಗದ ಅನೇಕ ಮಂದಿ ಬೆಳಿಗ್ಗೆ ಪುತ್ತೂರು ರೈಲು ನಿಲ್ದಾಣದ ತನಕ ತಮ್ಮ ವಾಹನದಲ್ಲಿ ಬಂದು ಅಲ್ಲಿಂದ ರೈಲಿನ ಮೂಲಕ ತಮ್ಮ ಮನೆಗೆ ತೆರಳುತ್ತಿದ್ದಾರೆ.
ಆದುದರಿಂದ ಬೆಳಿಗ್ಗೆ 7.00 ಗಂಟೆಗೆ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಿಂದ ರೈಲು ಹೊರಟು ಮಂಗಳೂರಿಗೆ ಹೋಗಬೇಕು. ಹಾಗೆಯೇ ಸಂಜೆ 6.00 ಗಂಟೆಗೆ ಮಂಗಳೂರಿನಿಂದ ಹೊರಟು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಬರಬೇಕು. ಇದರಿಂದ ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.