ಮಂಡೆಕೋಲು ಸಹಕಾರಿ ಸಂಘಕ್ಕೆ ಕೃಷಿ ಯಂತ್ರೋಪಕರಣ ಖರೀದಿಯಲ್ಲಿ ಪ್ರಥಮ ಸ್ಥಾನ

0

ದ.ಕ. ಕೃಷಿ ಅಭಿವೃದ್ಧಿ ಸಂಘದಿಂದ ಪ್ರಶಸ್ತಿ ಪ್ರದಾನ

ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಂಘದಿಂದ 2022 – 23ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳನ್ನು ಖರೀದಿಸುವುದರಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಜು.31ರಂದು ಮಂಗಳೂರಿನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2022 – 23ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಿ, ತಮ್ಮ ಸದಸ್ಯರಿಗೆ ವಿತರಿಸುವ ಸಹಕಾರಿ ಸಂಘಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಂಡೆಕೋಲು ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.