ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನಾಚರಣೆ ಆ. 3ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕಾರ್ಯಕ್ರಮ ಉದ್ಘಾಟಿಸಿ ಕ್ಯಾನ್ಸರ್ ಬಗ್ಗೆ ಜಾಗ್ರತೆ ವಹಿಸುವಂತೆ, ಕ್ಯಾನ್ಸರ್ ಕಾರಕ ಪದಾರ್ಥಗಳಿಂದ ದೂರ ಇರುವಂತೆ ಮಾಹಿತಿ ನೀಡಿದರು. ಶ್ವಾಸಕೋಶ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಂದಕಿಶೋರ್ ಕೆ.ಎಸ್ ಸ್ವಾಗತಿಸಿ, ಕಾರ್ಯಕ್ರಮದ ಮಹತ್ವದ ಕುರಿತು ಉಪನ್ಯಾಸ ನೀಡಿದರು.
ಉಸಿರಾಟದ ವಿಭಾಗದ ಪ್ರಾಧ್ಯಾಪಕ ಡಾ. ಪ್ರೀತಿರಾಜ್ ಬಲ್ಲಾಳ್
ಶ್ವಾಸಕೋಶದ ಕ್ಯಾನ್ಸರ್ ಪತ್ತೆಹಚ್ಚುವುದು ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್ ಕಾರ್ಯಕ್ರಮದ ಆಯೋಜಕರಿಗೆ ಧನ್ಯವಾದ ಹೇಳಿದರು.
ಕೆ.ವಿ.ಜಿ. ನರ್ಸಿಂಗ್ ಕಾಲೇಜಿನ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು, ಹೆಲ್ತ್ ಸೈಯನ್ಸ್ ಮತ್ತು ಬಿ.ಪಿ.ಟಿ
ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ಡಾ. ನಂದಕಿಶೋರ್ ವಂದಿಸಿದರು.