ಪೆರಾಜೆ ಜ್ಯೋತಿ ಪ್ರೌಢಶಾಲೆಗೆ ದೀಕ್ಷಾ ಟ್ರೇಡರ್ಸ್ ವತಿಯಿಂದ ಸಮವಸ್ತ್ರ ಕೊಡುಗೆ

0

ಪೆರಾಜೆ ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸುಳ್ಯದ ವಿಶ್ವ ಕಾಂಪ್ಲೆಕ್ಸ್ ನಲ್ಲಿ ರುವ ಮಾಧವ ರಾವ್ ಮಾಲಕತ್ವದ ದೀಕ್ಷಾ ಟ್ರೇಡರ್ಸ್ ವತಿಯಿಂದ ಎರಡು ಜತೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿರುತ್ತಾರೆ.


ಕಳೆದ ಮೂರು ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ನಿರಂತರವಾಗಿ ಸಮವಸ್ತ್ರವನ್ನು ಉಚಿತವಾಗಿ ನೀಡುವುದರೊಂದಿಗೆ ಸಹಕರಿಸಿರುತ್ತಾರೆ.


ಈ ಸಂದರ್ಭದಲ್ಲಿ ಜ್ಯೋತಿ ವಿದ್ಯಾ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಎ.ಜ್ಞಾನೇಶ್, ಸದಸ್ಯರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.