ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಭಾಷಾ ಸಂವಹನ ಕಲಿಕಾ ಕಾರ್ಯಕ್ರಮ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ ಸಾಹಿತ್ಯ ಸಂಘದ ವತಿಯಿಂದ ಭಾಷಾ ಸಂವಹನ ಕಲಿಕಾ ಕಾರ್ಯಕ್ರಮವನ್ನು ಆಚರಿಸಲಾಯಿತು.ಭಾಷಾ ಸಂವಹನ ಕಲಿಕಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷಗೆ ಸಂಬಂಧಪಟ್ಟ ಬೇರೆ ಬೇರೆ ರೀತಿಯ ಭಿತ್ತಿ ಪತ್ರಿಕೆಗಳನ್ನು ತಯಾರಿಸಿ ಪ್ರದರ್ಶಿಸಲಾಯಿತು.


ಈ ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಘದ ವಿದ್ಯಾರ್ಥಿಗಳು, ಪ್ರಾಂಶುಪಾಲರಾದ ಶೋಭಾ ಕಿಶೋರ್ ,ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಂಟನೇ ತರಗತಿ ವಿದ್ಯಾರ್ಥಿನಿ ತಿಶಾ ಕದೀಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.