ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಛೇರಿ ಸುಳ್ಯ ಹಾಗೂ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮವು ಆ 5 ರಂದು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೇವಚಳ್ಳ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಪ್ರೇಮಲತಾ ಕೇರ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಇವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕ ಎ.ವಿ. ತೀರ್ಥರಾಮ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಇಂದಿರೇಶ ಗುಡ್ಡೆ, ಜ್ಞಾನದೀಪ ವಿದ್ಯಾಸಂಸ್ಥೆಯ ನಿರ್ದೇಶಕರುಗಳಾದ ಮಹಾವೀರ ಜೈನ್, ಕೃಷ್ಣಯ್ಯ ಮೂಲತೋಟ, ರಾಧಾಕೃಷ್ಣ ಶ್ರೀ ಕಟೀಲ್ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿಯರಾದ ಶ್ರೀಮತಿ ರೇಖಾ ಎನ್. ಪಿ, ಹಾಗೂ ಪಲ್ಲವಿ ಕೆ. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.
ಶಾಲಾ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು ಕಾರ್ಯಕ್ರಮವನ್ನು ಸ್ವಾಗತಿಸಿ, ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ದಿವ್ಯಕುಮಾರಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕ ವೃಂದದವರು ಉಪಸ್ಥಿತರಿದ್ದರು.