ಸುಳ್ಯದ ಸಂಧ್ಯಾರಶ್ಮಿ ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದಲ್ಲಿ ಆಟಿ ಉತ್ಸವ ಆ. 1ರಂದು ಸಂಧ್ಯಾರಶ್ಮಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಡಾ. ರಂಗಯ್ಯರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ನಿವೃತ್ತ ಪ್ರಾಂಶುಪಾಲರಾದ ಪ್ರೊ. ದಾಮೋದರ ಗೌಡ ಸ್ವಾಗತಿಸಿ ಆಟಿಯ ಮಹತ್ವದ ಬಗ್ಗೆ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.
ನಿವೃತ್ತ ಯೋಧ ಅಡ್ಡಂತಡ್ಕ ದೇರಣ್ಣ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೇಖಕಿ ಚಂದ್ರಾವತಿ ಬಡ್ಡಡ್ಕ ಆಟಿಯ ಬಗ್ಗೆ ಉಪನ್ಯಾಸ ನೀಡಿದರು. ಪದಾಧಿಕಾರಿ ಸಿ.ಎ. ಕೇಶವ ಮಾಸ್ತರ್ ಆಟಿ ಪಾಡ್ದನ ಹೇಳಿದರು. ಪದಾಧಿಕಾರಿ ಸುಬ್ರಹ್ಮಣ್ಯ ಹೊಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ರಂಗಯ್ಯ ವಂದಿಸಿದರು. ಮಧ್ಯಾಹ್ನ ಆಟಿಯ ವಿಶೇಷ ಖಾದ್ಯಗಳನ್ನು ಸವಿದರು. ಸಂಧ್ಯಾರಶ್ಮಿ ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ಸದಸ್ಯರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಎಂ.ಆರ್. ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.