ಐವರ್ನಾಡು : ನಿಡುಬೆ,ಪೂಜಾರಿಮನೆ ಕುಟುಂಬಸ್ಥರಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ನಿಡುಬೆ ಪೂಜಾರಿಮನೆ ಕುಟುಂಬಸ್ಥರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಬಾಂಜಿಕೋಡಿವರೆಗೆ ಆ.06 ರಂದು ನಡೆಯಿತು.


ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ಪಂಚಾಯತ್ ಸಿಬ್ಬಂದಿಗಳು, ನಿಡುಬೆ, ಪೂಜಾರಿಮನೆ ಕುಟುಂಬಸ್ಥರು ಹಾಗೂ ಊರಿನ ಪ್ರಮುಖರು ಭಾಗವಹಿಸಿದರು.