ಜಾಲ್ಸೂರು ಸೋಶಿಯಲ್ ಫೋರಮ್ ವತಿಯಿಂದ ಸರ್ಕಾರಿ ಸವಲತ್ತುಗಳ ಬಗೆಗಿನ ಮಾಹಿತಿ ಕಾರ್ಯಗಾರ ಆ 6 ರಂದು ಅಡ್ಕಾರು ಮದರಸ ವಠಾರದಲ್ಲಿ ನಡೆಯಿತು.
ಸುಳ್ಯ ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಾಹಿತಿಕೇಂದ್ರದ ಮಾಹಿತಿಗಾರ ಕಮಾಲ್ ಕಡಬ ಸರ್ಕಾರದಿಂದ ಸಿಗುವ ಸವಲತ್ತುಗಳು, ವಿದ್ಯಾರ್ಥಿ ವೇತನ, ಶೈಕ್ಷಣಿಕ ಮತ್ತು ಉದ್ಯೋಗಗಳ ಕುರಿತು ಮಾಹಿತಿ ನೀಡಿದರು.
ಫಲಾನುಭವಿಗಳು ಇದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನಗಳ ಬಗ್ಗೆಯೂ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ಇಬ್ರಾಹಿಂ ಕದಿಕ್ಕಡ್ಕ ವಹಿಸಿದ್ದರು.ಸ್ಥಳೀಯ ಮಸೀದಿ ಖತೀರಾದ ಅಬ್ದುಲ್ ಖಾದರ್ ಸಕಾಫಿ ದುವಾ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಮಿತಿಯ ನಿರ್ದೇಶಕ ಅಡ್ವಕೇಟ್ ಅಬೂಬಕ್ಕರ್ ಅಡ್ಕಾರ್ ಸ್ವಾಗತಿಸಿ ಪ್ರಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಜಮಿಯತುಲ್ ಫಲಾಹ್ ಸಂಘಟನೆಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ ಅಡ್ವಕೇಟ್ ಅಬೂಬಕ್ಕರ್ ಅಡ್ಕಾರ್ ರವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ನಿರ್ದೇಶಕ ಲತೀಫ್ ಅಡ್ಕಾರ್ ವಂದಿಸಿದರು.
ಕಾರ್ಯಗಾರದಲ್ಲಿ ಸ್ಥಳೀಯ ನೂರಾರು ಮಂದಿ ಭಾಗವಹಿಸಿದ್ದರು.