ಚೊಕ್ಕಾಡಿ ಪ್ರೌಢಶಾಲೆಯಲ್ಲಿ ವೃಕ್ಷಾರೋಹಣ

0

ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಇಕೋ ಕ್ಲಬ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇವರ ಸಹಯೋಗದಲ್ಲಿ ವೃಕ್ಷಾರೋಹಣ ಕಾರ್ಯಕ್ರಮವು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ರಿಂದ ಅನಿಲ್ ಪೂಜಾರಿಮನೆಯವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ತೇಜಸ್ವಿ ಕಡಪಳ , ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು, ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಜಯನಗರ, ನಿರ್ದೇಶಕರಾದ ರಾಜೀವಿ ಗೋಳ್ಯಾಡಿ, ಚೊಕ್ಕಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ.ಎ.ಎಲ್ ಹಾಗೂ ಶಿಕ್ಷಕ-ಸಿಬ್ಬಂದಿ ವರ್ಗ ಮತ್ತು ಇಕೋ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.


ಸಂಕೀರ್ಣ.ಎ.ಎಲ್ ಅತಿಥಿಗಳನ್ನು ಸ್ವಾಗತಿಸಿದರು.ಇಕೋ ಕ್ಲಬ್ ನ ಸಹಕಾರದೊಂದಿಗೆ ಶಾಲಾ ಆವರಣದಲ್ಲಿ 250 ಗಿಡಗಳನ್ನು ನೆಡಲಾಯಿತು.