ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ವಿದ್ಯಾರ್ಥಿಗಳಿಗಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪೂರಕ ಪರೀಕ್ಷೆ-2 ನ್ನು ನಡೆಸುತ್ತಿದ್ದು ಅನುತ್ತೀರ್ಣರಾದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಮರು ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆಗಸ್ಟ್ 8 ರಂದು ಸಂಬಂಧಪಟ್ಟ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು.
ಸರಕಾರಿ ಪದವಿ ಪೂರ್ವ ಕಾಲೇಜು ಗಾಂಧಿನಗರದಲ್ಲಿ ಪರೀಕ್ಷೆ ಕಟ್ಟಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 8 ರಂದು ಅರ್ಜಿ ಸಲ್ಲಿಸಲು ಈ ಮೂಲಕ ಕೋರಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ. ಪ. ಪೂ ಕಾಲೇಜು ಗಾಂಧಿನಗರ, ಸುಳ್ಯ
9741950566.