ದ. ಕ. ಜಿಲ್ಲಾ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘದ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ್ ನಾಯಕ್

0

ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘದ ಜಿಲ್ಲಾಧ್ಯಕ್ಷರಾಗಿ ಎಸ್.ಎಸ್.ಪಿ.ಯು. ಕಾಲೇಜಿನ ಸೋಮಶೇಖರ್ ನಾಯಕ್ ಆಯ್ಕೆಯಾಗಿದ್ದಾರೆ.

ಉಳಿದಂತೆ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ರವಿಕುಮಾರ್ ಕಾರ್ಯದರ್ಶಿಯಾಗಿ ನೇಮಕಗೊಂಡರು. ಕೆನರಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಧುಕೇಶ್ವರ್ ಶಾಸ್ತ್ರಿ ಉಪಾಧ್ಯಕ್ಷರು, ಎಡಪದವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸತೀಶ್ ಕೋಶಾಧಿಕಾರಿ,
ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಕಿರಣಾ ಜತೆ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದರು.

ಅಲ್ಲದೆ ಸಂಘವನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಅನುದಾನಿತ ನೌಕರರ ಸಂಘ ( ರಿ) ಎಂದು ಶೀರ್ಷಿಕೆಯಾಗಿ ಬದಲಾವಣೆ ಮಾಡಿಕೊಳ್ಳಲು ನಿರ್ಧರಿಸಲಾಯಿತು.