ಅಮರಮುಡ್ನೂರು ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭ

0

ಅಮರಮುಡ್ನೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದ ಮೇರೆಗೆಚುನಾವಣಾಧಿಕಾರಿಗಳ ಅಧಿಸೂಚನೆಯಂತೆ ಚುನಾವಣಾ
ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಪಂಚಾಯತ್ ನಲ್ಲಿ ಒಟ್ಟು 17 ಮಂದಿ ಸದಸ್ಯರನ್ನು ಹೊಂದಿದ್ದು ಕಳೆದ ಅವಧಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಪೈಕಿ ಅಧ್ಯಕ್ಷೆ ಪದ್ಮಪ್ರಿಯಾ ಮೇಲ್ತೋಟ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಕೇನಡ್ಕರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಮುಂದಿನ ಎರಡುವರೆ ವರ್ಷಗಳ ಅವಧಿಗೆ ಆಯ್ಕೆ ಪ್ರಕ್ರಿಯೆ ಅವಿರೋಧವಾಗಿ ಅವಕಾಶವಿಲ್ಲದಿದ್ದುದರಿಂದ ಚುನಾವಣೆಯನ್ನು ಎದುರಿಸಬೇಕಾಯಿತು.
ಪ್ರತಿಸ್ಪರ್ಧಿಗಳಾಗಿ ನಾಲ್ಕು ಮಂದಿ ಸದಸ್ಯರ ಬಲ ಹೊಂದಿರುವ
ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಮೀನಾಕ್ಷಿ ಚೂಂತಾರು ಅಧ್ಯಕ್ಷತೆಗೆ ಹಾಗೂ ಅಶೋಕ್ ಚೂಂತಾರು ಉಪಾಧ್ಯಕ್ಷತೆಗೆ ಸ್ಪರ್ಧಿಸಿದ್ದರು. ನಾಮಪತ್ರ ಹಿಂತೆಗೆದುಕೊಳ್ಳಲು‌ ಸಮಯವಕಾಶ ನೀಡಲಾಯಿತು.

ನಾಲ್ಕು ಮಂದಿ ಸದಸ್ಯರು ನೇರ ಸ್ಪರ್ಧಾ ಕಣದಲ್ಲಿದ್ದು ಚುನಾವಣೆ ನಡೆಸಲಾಯಿತು. ಅಧ್ಯಕ್ಷ ರ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ನಡೆಯಲಿದೆ. ಮಧ್ಯಾಹ್ನದ ನಂತರ ಮತ ಎಣಿಕೆಯ ಬಳಿಕ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆ ಯಾರೆಂದು ಖಚಿತ ಮಾಹಿತಿ ಲಭ್ಯವಾಗುವುದು.
ಎಲ್ಲಾ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದರು.

ಚುನಾವಣಾಧಿಕಾರಿ ಇಂಜಿನಿಯರ್ ಮಣಿಕಂಠ ಹಾಗೂ ಪಂ.ಪಿ.ಡಿ.ಒ ದಯಾನಂದ ಪತ್ತುಕುಂಜ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.