ಕನಕಮಜಲು ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆ ಆರಂಭ

0

ಅಧ್ಯಕ್ಷತೆಗೆ ಶ್ರೀಮತಿ ಶಾರದಾ ಉಗ್ಗಮೂಲೆ ಹಾಗೂ ಉಪಾಧ್ಯಕ್ಷತೆಗೆ ರವಿಚಂದ್ರ ಕಾಪಿಲ ನಾಮಪತ್ರ ಸಲ್ಲಿಕೆ

ಕನಕಮಜಲು ಗ್ರಾಮ ಪಂಚಾಯತಿಯ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಆ.9ರಂದು ನಡೆಯಲಿದ್ದು, ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ.

ಸಾಮಾನ್ಯ ಮಹಿಳಾ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿರುವ ಶ್ರೀಮತಿ ಶಾರದಾ ಉಗ್ಗಮೂಲೆ ಹಾಗೂ ಸಾಮಾನ್ಯ ಸ್ಥಾನವು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಈ ಸ್ಥಾನದಿಂದ ಆಯ್ಕೆಯಾದ ರವಿಚಂದ್ರ ಕಾಪಿಲ ಅವರು ಉಪಾಧ್ಯಕ್ಷತೆಗೆ ತಮ್ಮ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿಯಾಗಿ ಸಹಾಯಕ ತೋಟಗಾರಿಕಾ ಅಧಿಕಾರಿ ಜಗದೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್ ಟಿ., ಅಧ್ಯಕ್ಷ ಶ್ರೀಧರ ಕುತ್ಯಾಳ, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಹೇಮಂತ್ ಮಠ ಉಪಸ್ಥಿತರಿದ್ದರು.