ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ಇದರ ಅಧ್ಯಕ್ಷ ,ಉಪಾಧ್ಯಕ್ಷ ರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ.
ಕಳೆದ ಎರಡುವರೆ ವರ್ಷದ ಅವಧಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಪೈಕಿ ಅಧ್ಯಕ್ಷೆಯಾಗಿ ಶ್ರೀಮತಿ ಚಂದ್ರಕಲಾ ಬಳ್ಳಡ್ಕ ಹಾಗೂ ಉಪಾಧ್ಯಕ್ಷೆಯಾಗಿ ಶ್ರೀಮತಿ ಜಯಲಕ್ಷ್ಮಿ ಧರಣೀದರ ರವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಈಗಾಗಲೇ ಮುಂದಿನ ಎರಡುವರೆ ವರ್ಷದ ಅವಧಿಗೆ ಮೀಸಲಾತಿ ಪ್ರಕಟಗೊಂಡಂತೆ ಹಿಂದುಳಿದ ವರ್ಗ ಬಿ ಮಹಿಳೆ ಮತ್ತು ಉಪಾಧ್ಯಕ್ಷತೆಗೆ ಸಾಮಾನ್ಯ ವರ್ಗದ ಸದಸ್ಯರು ಅರ್ಹರಾಗಿರುತ್ತಾರೆ.
ಪಂಚಾಯತ್ ನಲ್ಲಿ ಒಟ್ಟು 10 ಸದಸ್ಯರ ಸಂಖ್ಯಾಬಲ ಹೊಂದಿದ್ದು ಬಿಜೆಪಿ ಬೆಂಬಲಿತ 8 ಮಂದಿ ಸದಸ್ಯರಿದ್ದಾರೆ. ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರನ್ನು ಹೊಂದಿದೆ.
ಆಯ್ಕೆ ಪ್ರಕ್ರಿಯೆ ನಡೆದು ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಬಹುತೇಕ ಅವಿರೋಧ ಆಯ್ಕೆ ಯಾಗುವ ಸಂಭವವಿದೆ.