ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ಇದರ ಮುಂದಿನ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಚಂದ್ರಕಲಾ ಬಳ್ಳಡ್ಕ ರವರು ಪುನರಾಯ್ಕೆ ಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ನಂಜಪ್ಪ ನಿಡ್ಯಮಲೆ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ಎರಡುವರೆ ವರ್ಷದ ಅವಧಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಪೈಕಿ ಅಧ್ಯಕ್ಷೆಯಾಗಿ ಶ್ರೀಮತಿ ಚಂದ್ರಕಲಾ ಬಳ್ಳಡ್ಕ ಹಾಗೂ ಉಪಾಧ್ಯಕ್ಷೆಯಾಗಿ ಶ್ರೀಮತಿ ಜಯಲಕ್ಷ್ಮಿ ಧರಣೀದರ ರವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಈಗಾಗಲೇ ಮುಂದಿನ ಎರಡುವರೆ ವರ್ಷದ ಅವಧಿಗೆ ಮೀಸಲಾತಿ ಪ್ರಕಟಗೊಂಡಂತೆ ಹಿಂದುಳಿದ ವರ್ಗ ಬಿ ಮಹಿಳೆ ಮತ್ತು ಉಪಾಧ್ಯಕ್ಷತೆಗೆ ಸಾಮಾನ್ಯ ನಿಗದಿಯಾಗಿತ್ತು.
ಪಂಚಾಯತ್ ನಲ್ಲಿ ಒಟ್ಟು 10 ಸದಸ್ಯರ ಸಂಖ್ಯಾಬಲ ಹೊಂದಿದ್ದು ಬಿಜೆಪಿ ಬೆಂಬಲಿತ 8 ಮಂದಿ ಸದಸ್ಯರಿದ್ದಾರೆ. ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರನ್ನು ಹೊಂದಿದೆ.
ಚುನಾವಣಾಧಿಕಾರಿಯಾಗಿ ಮಡಿಕೇರಿ ತಾಲೂಕಿನ ತೋಟಗಾರಿಕಾ ಇಲಾಖೆಯ ಅಧಿಕಾರಿ ಪ್ರಮೋದ್ ರವರು ಆಯ್ಕೆ ಪ್ರಕ್ರಿಯೆ ನಡೆಸಿದರು. ಪಂ.ಪಿ.ಡಿ.ಒ ಮಹಾದೇವ ಪ್ರಭು,ಕಾರ್ಯದರ್ಶಿ ಎಸ್. ಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅವಿರೋಧವಾಗಿ ಆಯ್ಕೆ ಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ ಕುಂದಲ್ಪಾಡಿ ಯವರು ಗ್ರಾಮದ ಅಭಿವೃದ್ಧಿ ಪರವಾಗಿ ಜನಪ್ರತಿನಿಧಿಗಳಿಗೆ ಕಿವಿ ಮಾತು ಹೇಳಿದರು.
ಪಂಚಾಯತ್ ಎಲ್ಲಾ ಸದಸ್ಯರು ಭಾಗವಹಿಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.