ಸಹಾಯಕ ತೋಟಗಾರಿಕಾ ಅಧಿಕಾರಿ ಜಗದೀಶ್ ಚುನಾವಣಾ ಅಧಿಕಾರಿಯಾಗಿ ಸಹಕಾರ
ಕನಕಮಜಲು ಗ್ರಾಮ ಪಂಚಾಯತಿಯ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಸಹಾಯಕ ತೋಟಗಾರಿಕಾ ಅಧಿಕಾರಿ ಜಗದೀಶ್ ಅವರು ಉಪಸ್ಥಿತರಿದ್ದರು.
ಒಟ್ಟು 7 ಮಂದಿ ಸದಸ್ಯ ಬಲದ ಗ್ರಾಮ ಪಂಚಾಯತಿ ಆಡಳಿತ ಮಂಡಳಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಐದು ಮಂದಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಎರಡು ಮಂದಿ ಸದಸ್ಯರುಗಳಿದ್ದಾರೆ.
ಸಾಮಾನ್ಯ ಮಹಿಳಾ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಶಾರದಾ ಉಗ್ಗಮೂಲೆ ಅವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸಾಮಾನ್ಯ ಸ್ಥಾನ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಸದಸ್ಯರಾದ ರವಿಚಂದ್ರ ಕಾಪಿಲ ಅವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದೇ ಇದ್ದ ಕಾರಣದಿಂದಾಗಿ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ ಹಾಗೂ ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ಎರಡೂವರೆ ವರ್ಷಗಳ ಅವಧಿಗೆ ಸಾಮಾನ್ಯ ಸ್ಥಾನದಿಂದ ಆಯ್ಕೆಯಾದ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷರಾಗಿ ಹಾಗೂ ಪರಿಶಿಷ್ಟ ಪಂಗಡ ಮಹಿಳಾ ಸ್ಥಾನದಿಂದ ಆಯ್ಕೆಯಾದ ಶ್ರೀಮತಿ ದೇವಕಿ ಕುದ್ಕುಳಿ ಅವರು ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.