ಕೊಡಿಯಾಲ ಗ್ರಾಮ ಪಂಚಾಯತ್ ಚುನಾವಣೆ – ನಾಮಪತ್ರ ಸಲ್ಲಿಕೆ

0

ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಆ.10 ರಂದು ನಡೆಯಲಿದ್ದು ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು ಪ್ರಸ್ತುತ ಉಪಾಧ್ಯಕ್ಷರಾಗಿರುವ ಹರ್ಷನ್ ಕೆ.ಟಿ .ನಾಮಪತ್ರ ಸಲ್ಲಿಸಿದ್ದಾರೆ.
ಉಪಾಧ್ಯಕ್ಷ ಸ್ಥಾನವೂ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಚಿತ್ರಾರವರು ನಾಮಪತ್ರ ಸಲ್ಲಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಒಬ್ಬರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ನಡೆಯಲಿದೆ.
ಪೆರುವಾಜೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮಚಂದ್ರ ಕೆ.ಚುನಾವಣಾಧಿಕಾರಿಯಾಗಿದ್ದು ನಾಮಪತ್ರ ಸ್ವೀಕರಿಸಿದರು.
ಪಿಡಿಒ ಜಯಂತ್ ಸಹಕರಿಸಿದರು.