ಆಲೆಟ್ಟಿ ಗ್ರಾಮ ಪಂಚಾಯತ್ ಇದರ ಅಧ್ಯಕ್ಷ ಉಪಾಧ್ಯಕ್ಷ ರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಎರಡುವರೆ ವರ್ಷದ ಅವಧಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಪೈಕಿ ಅಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಕುಡೆಕಲ್ಲು ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಕಣಕ್ಕೂರು ರವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಈಗಾಗಲೇ ಮುಂದಿನ ಎರಡುವರೆ ವರ್ಷದ ಅವಧಿಗೆ ಮೀಸಲಾತಿ ಪ್ರಕಟಗೊಂಡಂತೆ ಹಿಂದುಳಿದ ವರ್ಗ ಎ ಮಹಿಳೆ ಮತ್ತು ಉಪಾಧ್ಯಕ್ಷತೆಗೆ ಸಾಮಾನ್ಯ ವರ್ಗದ ಸದಸ್ಯರು ಅರ್ಹರಾಗಿರುತ್ತಾರೆ. ಪಂಚಾಯತ್ ನಲ್ಲಿ ಒಟ್ಟು 21 ಮಂದಿ ಸದಸ್ಯರ ಸಂಖ್ಯಾಬಲ ಹೊಂದಿದ್ದು ಬಿಜೆಪಿ ಬೆಂಬಲಿತ 13 ಮಂದಿ ಸದಸ್ಯರಿದ್ದಾರೆ.
ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿದೆ. ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು ಅಧ್ಯಕ್ಷತೆಗೆ ಹಿಂದುಳಿದ ವರ್ಗ ಎ ಮಹಿಳೆ ವೀಣಾ ಆಲೆಟ್ಟಿ ನಾಮಪತ್ರ ಸಲ್ಲಿಸಿರುತ್ತಾರೆ. ಉಪಾಧ್ಯಕ್ಷತೆಗೆ ಸಾಮಾನ್ಯ ವರ್ಗದಿಂದ ಕಮಲ ನಾಗಪಟ್ಟಣ ರವರು ನಾಮಪತ್ರ ಸಲ್ಲಿಸಿರುತ್ತಾರೆ. ಈಗಾಗಲೇ ಇಬ್ಬರು ನಾಮಪತ್ರ ಸಲ್ಲಿಸಿದ್ದು ಬಹುತೇಕ ಅವಿರೋಧ ಆಯ್ಕೆಯಾಗುವ ಸಂಭವವಿದೆ.