ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷತೆ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಏನೆಕಲ್ಲು ಗ್ರಾಮದ ದೇವರಹಳ್ಳಿ ವಾರ್ಡ್ ನ ಸುಜಾತಾ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯ ಎರಡನೇ ವಾರ್ಡಿನ ಸದಸ್ಯ ವೆಂಕಟೇಶ್ ಎಚ್.ಎಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.
ಚುನಾವಣಾ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸುಬ್ರಹ್ಮಣ್ಯ ಉಪ ವಿಭಾಗದ ಎ.ಇ.ಇ ಪ್ರಮೋದ್ ಕುಮಾರ್ ಕೆ. ಆಗಮಿಸಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿ. ಡಿ. ಓ ಆಕಾಶ್ ಹಾಗೂ ಕಾರ್ಯದರ್ಶಿ ಮೋನಪ್ಪ ಸಹಕರಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.