ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಧನಂಜಯಕುಮಾರ್, ಉಪಾಧ್ಯಕ್ಷರಾಗಿ ವಂದನಾ ಹೊಸ್ತೋಟ ಅವಿರೋಧ ಆಯ್ಕೆ

0


ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಧನಂಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಂದನಾ ಹೊಸ್ತೋಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಇಲ್ಲಿನ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೂ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವಿಭಾಗಕ್ಕೂ ಮೀಸಲಾಗಿತ್ತು. 8 ಮಂದಿ ಸದಸ್ಯ ಬಲದ ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ನಲ್ಲಿ 6 ಮಂದಿ ಬಿಜೆಪಿ ಬೆಂಬಲಿತರು ಹಾಗೂ ಇಬ್ಬರು ಕಾಂಗ್ರೆಸ್ ಬೆಂಬಲಿತರು ಇದ್ದಾರೆ. ಎರಡೂ ಸ್ಥಾನಗಳಿಗೂ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು.


ಉನಾವಣಾಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಅರಬಣ್ಣ ಪೂಜೇರಿ ಕಾರ್ಯನಿರ್ವಹಿಸಿದ್ದು, ಪಿಡಿಒ ಶ್ರೀಮತಿ ಲೀಲಾವತಿ ಸಹಕರಿಸಿದರು.