ಸುಳ್ಯದ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.
ವಕೀಲರಾದ ದಳ ಸುಬ್ರಾಯ ಭಟ್ ಪೋಕ್ಸೋ ಕಾಯ್ದೆ ಕುರಿತು ಕಾನೂನು ಮಾಹಿತಿ ನೀಡಿದರು. ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್ ಡಿ ಪಿ ಮತ್ತು ಅಧಿವಕ್ತಾ ಪರಿಷತ್ತಿನ ಸುಳ್ಯ ಘಟಕದ ಅಧ್ಯಕ್ಷ ಹರೀಶ್ ಬೂಡುಪನ್ನೆ ಅತಿಥಿಯಾಗಿ ಉಪಸ್ಥಿತರಿದ್ದರು.
ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ದೀಪಕ್ ರವರು ಅಧ್ಯಕ್ಷತೆ ವಹಿಸಿದ್ದರು.