ಜ್ಞಾನದೀಪ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ತನುಷ್ ಎಮ್ ಎಚ್ ಯೋಗದಲ್ಲಿ ಪ್ರಥಮ

0

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಚೇರಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ.11ರಂದು ನಡೆದ ಸುಳ್ಯ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭಾಗವಹಿಸಿ ತನುಷ್. ಎಮ್. ಎಚ್. ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಆ.30ರಂದು ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ. ಇವರು ಉಬರಡ್ಕ ಗ್ರಾಮದ ಹರೀಶ್ ಮೊಂಟಡ್ಕ ಹಾಗೂ ಭವಾನಿ ಮೊಂಟಡ್ಕ ಇವರ ಪುತ್ರ.