ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಆ. 10 ರಂದು ಸುಳ್ಯ ಕೇರ್ಪಳ ಬಂಟರ ಭವನದಲ್ಲಿ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ಸಭೆಯು ನಡೆಯಿತು.
ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ ಅಮೆಚೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಘಟಕದ ಸ್ವಯಂ ಸೇವಕರಿಗೆ ತುರ್ತು ಸೇವೆಯ ಕುರಿತು ಕಿವಿ ಮಾತು ಹೇಳಿದರು.
ಯೋಜನೆಯ
ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಸುಳ್ಯ ತಾಲೂಕು ಯೋಜನಾಧಿಕಾರಿ ನಾಗೇಶ್ ಪಿ, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ, ವಿಪತ್ತು ನಿರ್ವಹಣಾ ಘಟಕದಯೋಜನಾಧಿಕಾರಿ ಜೈವಂತ ಪಟೆಗಾರ ಉಪಸ್ಥಿತರಿದ್ದರು.