ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಹಿಳಾ ವೇದಿಕೆ ವತಿಯಿಂದ ಆಟಿ ಆಚರಣೆ ಇಂದು ಗಿರಿದರ್ಶಿನಿ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ ಹೊನ್ನೋಡಿ ಉದ್ಘಾಟಿಸಿ ಮಾತನಾಡಿ ಹಿಂದಿನ ಕಾಲದ ಸಂಸ್ಕೃತಿಯನ್ನು ಕಳೆದುಕೊಂಡಿದ್ದೇವೆ. ಟಿ.ವಿ, ಮೊಬೈಲ್ ನಿಂದಾಗಿ ಎಲ್ಲಾ ಆಚರಣೆಗಳು ಹಿಂದೆ ಬಿದ್ದಿದೆ. ಅದಕ್ಕೆ ಪೂರಕವಾಗಿ ಪ್ರಕೃತಿಯ ಸ್ಪಂದನೆಯೂ ಕಾಣುತ್ತಿಲ್ಲ ಎಂದರು.
ಸಭೆಯ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜಾ ಜನಾರ್ದನ ವಹಿಸಿದ್ದರು. ಮರಾಟಿ ಸಂಘದ ಅಧ್ಯಕ್ಷರಾದ ಜನಾರ್ದನ ಬಿ.ಕುರುಂಜಿಭಾಗ್, ಗೌರವಾಧ್ಯಕ್ಷ ಸೀತಾನಂದ ಬೇರ್ಪಡ್ಕ, ಮಾಜಿ ಅಧ್ಯಕ್ಷ ನಾರಾಯಣ ನಾಯ್ಕ, ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಭಸ್ಮಡ್ಕ ಸ್ವಾಗತಿಸಿ, ಜತೆ ಕಾರ್ಯದರ್ಶಿ ಶ್ರೀಮತಿ ರೇವತಿ ದೊಡ್ಡೇರಿ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಕುಸುಮ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಮಹಿಳಾ ವೇದಿಕೆಯ ಸದಸ್ಯರು ಮನೆಯಲ್ಲಿ ತಯಾರಿಸಿ ತಂದ ಆಟಿ ತಿಂಗಳ ವಿವಿಧ ಖಾದ್ಯ ಗಳನ್ನು ಸವಿಯಲಾಯಿತು.