ಕೆವಿಜಿ ದಂತ‌ ಮಹಾವಿದ್ಯಾಲಯದಲ್ಲಿ ಗ್ರಂಥ ಪಾಲಕರ ದಿನಾಚರಣೆ

0

ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಗ್ರಂಥ ಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಭಾರತದಲ್ಲಿ ಗ್ರಂಥಾಲಯಗಳ ಸ್ಥಾಪನೆ ಮಾಡಿ ಅದರ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಶಿಯ್ಯಾಳಿ ರಾಮಾಮೃತ ರಂಗನಾಥನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಗುವುದು.

ಕೆವಿಜಿ ದಂತಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|ಮೋಕ್ಷ ನಾಯಕ್ ದೀಪ ಬೆಳಗಿ ಉದ್ಘಾಟಿಸಿ ಶುಭ ಹಾರೈಸಿದರು. ದಂತಮಹಾವಿದ್ಯಾಲಯದ ಎಲ್ಲ ವಿಭಾಗ ಮುಖ್ಯಸ್ಥರುಗಳು ಬೋದಕ ಬೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.