ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಪಾಲಕರ ದಿನಾಚರಣೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಆ.12 ರಂದು ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.
ನಿಯೋಜಿತ ಅಧ್ಯಕ್ಷರಾದ ಶ್ರೀಮತಿ ನಮಿತಾ ಎನ್. ರೈಯವರು ದೀಪ ಬೆಳಗಿಸಿದರು.

ಶ್ರೀಮತಿ ಸುಪ್ರಿಯಾ , ಉಪನ್ಯಾಸಕರು , ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು , ಪೆರುವಾಜೆ ಇವರು ಉಪನ್ಯಾಸ ನೀಡಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.