ಬೆಳ್ಳಾರೆ : ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಾಹಿತಿ ಕಾರ್ಯಕ್ರಮ, ಆಟಿದ ಕೂಟ

0

ಗ್ರಾಮ ಪಂಚಾಯತ್ ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಾಹಿತಿ ಕಾರ್ಯಕ್ರಮ ಮತ್ತು ಆಟಿದ ಕೂಟ ಕಾರ್ಯಕ್ರಮವನ್ನು ಆ.10 ರಂದು ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಚೀಮುಳ್ಳು ಇವರ ಸಭಾಧ್ಯಕ್ಷತೆಯಲ್ಲಿ ನಡೆಸಲಾಯಿತು.

ಬೆಳ್ಳಾರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ಳಾರೆ ವಲಯದ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ಕಾವ್ಯ. ಜೆ.ಹೆಚ್. ಆಯುರ್ವೇದ ತಜ್ಞರು, ವೇದಾಮೃತ ಚಿಕಿತ್ಸಾಲಯ ಬೆಳ್ಳಾರೆ ಇವರು ಸ್ತನ್ಯಪಾನದ ಬಗ್ಗೆ ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ. ಬಿ. ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್. ಎಂ.ಆರ್. ಇವರು ಅತಿಥಿಗಳ ನೆಲೆಯಲ್ಲಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಬೆಳ್ಳಾರೆ ಇದರ ವತಿಯಿಂದ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ. ಬಿ ಇವರನ್ನು ಅಭಿನಂದಿಸಲಾಯಿತು.
ಮಹಿಳಾ ಮಂಡಲದ ಸದಸ್ಯೆಯರು ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಸುಗಳನ್ನು ತಯಾರಿಸಿಕೊಂಡು ಬಂದರು. ಉತ್ತಮ ಪೋಷಕಾಂಶ ಇರುವ ಆಹಾರಕ್ಕೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಧನಲಕ್ಷ್ಮೀ ಸ್ತ್ರೀ ಗೊಂಚಲಿನ ಅಧ್ಯಕ್ಷರಾದ ಶ್ರೀಮತಿ ವೀಣಾ ಪೆರುವಾಜೆ. ಹಾಗೂ ಸ್ತ್ರೀ ಶಕ್ತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ವಸಂತಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ನೇಹಿತರ ಕಲಾ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಶ್ರೀ ಮಹಾವಿಷ್ಣು ಸೇವಾ ಸಮಿತಿಯ ಅಧ್ಯಕ್ಷರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಹಾಗೂ ಅಜಪಿಲ ಶ್ರೀ ಮಹಾಲಿಂಗೇಶ್ವರ ಭಜನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಶ್ರೀಮತಿ ಪೂರ್ಣಿಮಾ ನೆಟ್ಟಾರು ಪ್ರಾರ್ಥಿಸಿ, ಶ್ರೀಮತಿ ಇಂದಿರಾ ಅಜಪಿಲ ಸ್ವಾಗತಿಸಿದರು. ಶ್ರೀಮತಿ ಪೂರ್ಣಿಮಾ ಪಡ್ಪು ಕಾರ್ಯಕ್ರಮ ನಿರೂಪಿಸಿ, ಕುಸುಮ ಕುರಂಬುಡೇಲು ಧನ್ಯವಾದಗೈದರು. ನಂತರ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.