ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾವನಾ ಸುಗಮ ಸಂಗೀತ ಬಳಗ ಮತ್ತು ಸಾಹಿತ್ಯ ಸಂಘ, ಕೆ. ಪಿ. ಎಸ್.ಬೆಳ್ಳಾರೆ ಇದರ ಆಶ್ರಯದಲ್ಲಿ ಮಳೆ ಹಾಡುಗಳ ಕಲರವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆ ಪಿ ಎಸ್ ಬೆಳ್ಳಾರೆ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಶ್ರೀನಾಥ ರೈ ನಡೆಸಿ ಮಳೆ ಹಾಡುಗಳ ಕಲರವ ಕಾರ್ಯಕ್ರಮ ನೆರವೇರಿಸಿ ಶುಭ ಹಾರೈಸಿದರು
ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪ ಪ್ರಾಂಶುಪಾಲರಾದ ಉಮಾಕುಮಾರಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಂಗೀತ ಹಾಗೂ ಸಾಹಿತ್ಯಾಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮ ಪೂರಕ ಎಂದು ತಿಳಿಸಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಾಹಿತ್ಯದ ಬಗ್ಗೆ ಅಭಿರುಚಿ ಹಾಗೂ ಪ್ರೇರಣೆ ನೀಡುತ್ತಿದೆ ಎಂದು ಶ್ಲಾಘಿಸಿದರು.
ಸಂಗೀತ ವರ್ಷಧಾರೆ ಮಳೆ ಕಲರವ ಕಾರ್ಯಕ್ರಮವನ್ನು ಭಾವನಾ ಸುಗಮ ಸಂಗೀತ ಬಳಗದ ಕೆ ಆರ್ ಗೋಪಾಲಕೃಷ್ಣ ಹಾಗೂ ಕುಮಾರಿ ಶುಭದಾ ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ ಸಾ ಪ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ವಹಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಇವರು ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಅಧ್ಯಕ್ಷರಾದ ಸಮನ್ವಿತ ಸ್ವಾಗತಿಸಿದರು. ಸಾಹಿತ್ಯ ಸಂಘದ ಸದಸ್ಯೆಡಯಾನಾ ಶೆಟ್ಟಿ ಇವರು ಕಾರ್ಯಕ್ರಮ ನಿರೂಪಿಸಿದರು.