ಆ. 14: ಸವಣೂರಿನಲ್ಲಿ 12ನೇ ವರ್ಷದ ಸ್ಥಾಪಕರ ದಿನಾಚರಣೆ

0

ಶೀಂಟೂರು ಸ್ಮೃತಿ – 2023

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕರಾದ ಶೀಂಟೂರು ನಾರಾಯಣ ರೈಯವರ 12ನೇ ವರ್ಷದ ಸ್ಥಾಪಕರ ದಿನಾಚರಣೆ ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಪೂ. 10.00 ಗಂಟೆಯಿಂದ ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ವಹಿಸಲಿದ್ದಾರೆ. ಮುಂಬಯಿಯ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಸನ್ಮಾನಿಸಲಿದ್ದಾರೆ. ಇಂಡಿಯನ್ ನೇವಿ ಚೀಫ್ ಇಲೆಕ್ಟ್ರಿಕಲ್ ಆರ್ಟಿಫಿಶರ್ ರೆಡಿಯೋ ಚಿಯರ್ (ನಿವೃತ್ತ) ವಿಕ್ರಂ ದತ್ತ ಶೀಂಟೂರು ಸನ್ಮಾನ ಪಡೆಯಲಿದ್ದಾರೆ. ಮಂಗಳೂರು ಕಾಲೇಜ್ ಆಫ್ ಫಿಷರೀಸ್ ನ ನಿವೃತ್ತ ಡೈರೆಕ್ಟರ್ ಆಫ್ ಇನ್ಸ್ಟಕ್ಷನ್ ಪ್ರೊ. ಡಾ. ಡಿ.ಎಸ್. ಶೇಷಪ್ಪ ಶೀಂಟೂರು ಸಂಸ್ಕರಣೆ ಮಾಡಲಿದ್ದಾರೆ.

ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ, ಗುಜರಾತ್ ಗ್ರೀನ್ ಹೀರೋ ಆಫ್ ಇಂಡಿಯಾದ ಸಹ ಸಂಸ್ಥಾಪಕರಾದ ಡಾ. ಆರ್. ಕೆ. ನಾಯರ್, ಫಾರೆಸ್ಟ್ ಕ್ರಿಯೇಟರ್, ದುಬೈ ಕ್ವರಿಯತ್ ಅಲ್ ಶಮ್ಸ್ ಬಿಲ್ಡಿಂಗ್ ಕನ್ಸ್ಟ್ರಕ್ಟಿಂಗ್ ಎಲ್.ಎಲ್.ಸಿ. ಮೇನೇಜಿಂಗ್ ಡೈರೆಕ್ಟರ್ ಅಶ್ರಫ್ ಮಾಂತೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ವಿಶ್ವಸ್ಥರಾದ ಎನ್. ಸುಂದರ ರೈ ಸವಣೂರು ಮತ್ತು ಸವಣೂರು ವಿದ್ಯಾರಶ್ಮಿ ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ

ಇಂ. ಅಶ್ವಿನ್ ಎಲ್. ಶೆಟ್ಟಿ ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈ ತಿಳಿಸಿದ್ದಾರೆ. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾರಾಯಣ ಮೂರ್ತಿ ಕೆ ಸೇರಿದಂತೆ ಉಪನ್ಯಾಸ ವೃಂದ, ಬೋಧಕೇತರ ಸಿಬ್ಬಂದಿ, ಎಸ್. ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಹಕಾರ ನೀಡಲಿದ್ದಾರೆ.