ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಶ್ರಾವಣ ಕಾರ್ಯಕ್ರಮ

0

ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ರಿಗೆ ಗೌರವ

ಯುವಾ ಬ್ರಿಗೇಡ್ ಸೋದರಿ ನಿವೇದಿತ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆ.13 ರಿಂದ ಮೂರು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ಶ್ರಾವಣ ಕಾರ್ಯಕ್ರಮದಲ್ಲಿ ತಾಯಿ ಭಾರತಿಗೆ ಪದ್ಮ ದಳಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ತೂಗುಸೇತುವೆಗಳ ಸರದಾರ ಸುಳ್ಯದ ಡಾ. ಗಿರೀಶ್ ಭಾರದ್ವಾಜ್ ಅವರನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮವು ಬೆಂಗಳೂರಿನ ಎಚ್ಎಎಲ್ ಸಮೀಪದ ವಿಭೂತಿಪುರ ಮಠದಲ್ಲಿ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ನಡೆಯುತ್ತಿದೆ.

ರಾಜ್ಯದ ವಿವಿಧ‌ಕಡೆಗಳಿಂದ ಯುವ ಬ್ರಿಗೇಡ್ ಕಾರ್ಯಕರ್ತರು ಇದರಲ್ಲಿ ಭಾಗವಹಿಸುತ್ತಿದ್ದಾರೆ.