ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮವು ಆ.15ರಂದು ಜರುಗಿತು.
ಕನಕಮಜಲಿನ ಸಂಘದ ಪ್ರಧಾನ ಕಛೇರಿಯ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಶುಭಹಾರೈಸಿದರು.
ಬಳಿಕ ಸಂಘದ ಅಡ್ಕಾರು ಶಾಖೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಸಹಕಾರಿ ಸಂಘದ ನಿರ್ದೇಶಕರುಗಳಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶ್ರೀಕೃಷ್ಣ ಭಟ್ ನೆಡಿಲು, ಗಣೇಶ್ ಅಂಬಾಡಿಮೂಲೆ, ಮಹೇಶ್ವರ ಕಾರಿಂಜ, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಮತಿ ಪ್ರೇಮಲತಾ, ಶೇಷಪ್ಪ ನಾಯ್ಕ ಕಜೆಗದ್ದೆ, ಶ್ರೀಮತಿ ಭಾರತಿ ಕಜೆಗದ್ದೆ, ಸಂಘದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಶಾಲಪ್ಪ ಗೌಡ ಕಣಜಾಲು, ಮಾಜಿ ಅಧ್ಯಕ್ಷರುಗಳಾದ ಪದ್ಮನಾಭ ಭಟ್ ಮಳಿ, ಜಯರಾಮ ರೈ ಜಾಲ್ಸೂರು, ಐ.ಕೆ. ಹೇಮಚಂದ್ರ ಕದಿಕಡ್ಕ, ಹರೀಶ್ ಮೂರ್ಜೆ, ವಸಂತ ಗಬ್ಬಲಡ್ಕ, ನೇತ್ರಕುಮಾರ್ ಪೇರೋಳಿ, ಮಾಜಿ ಉಪಾಧ್ಯಕ್ಷ ಮಾದವ ಗೌಡ ಕಾಳಮನೆ, ಸೇರಿದಂತೆ ಸಹಕಾರಿ ಸಂಘದ ಸಿಬ್ಬಂದಿಗಳು , ಕನಕಮಜಲು ಮತ್ತು ಜಾಲ್ಸೂರು ಗ್ರಾಮಸ್ಥರು ಉಪಸ್ಥಿತರಿದ್ದರು.