ಕೇರ್ಪಳ ಶಾಲೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ‌ಕೇರ್ಪಳ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಉಷಾ ಸಿ.ಜೆ. ಧ್ವಜಾರೋಹಣ ಗೈದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೊನ್ನಮ್ಮ, ಪಯಸ್ವಿನಿ ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ಕೇರ್ಪಳ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶೋಭಾವತಿ ಹಾಗೂ ವಿದ್ಯಾರ್ಥಿಗಳು, ಪೋಷಕರು, ಊರವರು, ಯುವಕ ಮಂಡಲದ ಪದಾಧಿಕಾರಿಗಳು ಇದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೊನ್ನಮ್ಮರು ಮಕ್ಕಳಿಗೆ‌ ಕೊಡುಗೆಯಾಗಿ ನೀಡಿದ ಗುರುತಿನ ಚೀಟಿಯನ್ನು ವಿತರಿಸಲಾಯಿತು.