ಮಾಜಿ ಪ್ರಧಾನಿ ದೇವೇಗೌಡರು ಆ. 18 ರಂದು ಸುಬ್ರಹ್ಮಣ್ಯಕ್ಕೆ

0


ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆ.18 ರಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಆ.17 ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ವಠಾರದ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಅವರು ಅಂದು ಅಲ್ಲಿ ತಂಗಲಿದ್ದು,ಆ.18ರಂದು ಮಧ್ಯಾಹ್ನ ಮತ್ತೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.