ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.
ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಸದಸ್ಯೆ ವೀಣಾಕುಮಾರಿ ಆಲೆಟ್ಟಿ ಹಾಗೂ ಪ್ರಭಾರ ಪಿಡಿಒ ಸೃಜನ್ ಎ. ಜಿ ಉಪಸ್ಥಿತರಿದ್ದರು.


ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ ಸದಸ್ಯರು, ಆಶ್ರಮ ಶಾಲಾ ಶಿಕ್ಷಕಿ ಮತ್ತು ವಿದ್ಯಾರ್ಥಿಗಳು, ಸ್ಥಳೀಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ನಮ್ಮ ದೇಶ ನಮ್ಮ ಮಣ್ಣು ಎಂಬ ಘೋಷಣೆಯ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.