ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ 76 ನೇ ಸ್ವಾತಂತ್ರ್ಯೋತ್ಸವ

0

ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ನ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್, ಗ್ರಾಮ ಪಂಚಾಯತ್ ನಿಯೋಜಿತ ಉಪಾಧ್ಯಕ್ಷರಾದ ಶ್ರೀಮತಿ ಮೋಹಿನಿ ಎಂ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು, ಹರೀಶ್ ಎಂ, ಶ್ರೀಮತಿ ಮೀನಾಕ್ಷಿ ಕೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್, ಗ್ರಾಮ ಪಂಚಾಯತ್ ಕಾರ್ಯದರ್ಶಿಯವರಾದ ಗೋಪಾಲಕೃಷ್ಣ ಕೆ, ನಿವೃತ್ತ ಶಿಕ್ಷಕರಾದ ವಾಸುದೇವ ನಡ್ಕ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಂ.ಕೆ ಹನೀಫ್, ಇಸ್ಮಾಯಿಲ್ ಪಡ್ಪಿನಂಗಡಿ, ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಪಾಲಕಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪಂಚ್ ಪ್ರಾಣ್ ಪ್ರತಿಜ್ಞಾ ಸ್ವೀಕರಿಸಲಾಯಿತು, ನನ್ನ ಮಣ್ಣು ನನ್ನ ದೇಶ ಅಭಿಯಾನ ಶಿಲಾಫಲಕವನ್ನು ಅನಾವರಣಗೊಳಿಸಲಾಯಿತು, ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಿಯೋಜಿತ ಮಹೇಶ್ ಕುಮಾರ್ ಕರಿಕ್ಕಳ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.