ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.
ಭಜನಾ ಮಂದಿರದ ಅಧ್ಯಕ್ಷ, ಅವಿನ್ ಫೋಟೋಗ್ರಾಫಿ ಮಾಲಕ ಅವಿನ್ ಬೆಟ್ಟಂಪಾಡಿ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಂದಿರದ ಗೌರವಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ನಿರ್ದೇಶಕ ಆನಂದ ಬೆಟ್ಟಂಪಾಡಿ ಉಪಸ್ಥಿತರಿದ್ದರು. ಬೆಟ್ಟಂಪಾಡಿ ಮಹಿಳಾ ಮಂಡಲದ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು, ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದರು.