ಜಾಲ್ಸೂರು: ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಜಾಲ್ಸುರು ಗ್ರಾಮದ ಕೋನಡ್ಕ ಪದವು ಅಂಗನವಾಡಿ ಕೇಂದ್ರದಲ್ಲಿ 76ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು.
ಜಾಲ್ಸೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಯವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು, ಮಕ್ಕಳ ಪೋಷಕರು, ತಾಯಂದಿರು, ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ವಸಂತ್ ಸ್ವಾಗತಿಸಿ, ಪ್ರಾರ್ಥಿಸಿ , ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಶಾರದಾ ಸಹಕರಿಸಿದರು.