ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.
ಪಂಚಾಯತ್ ಅಧ್ಯಕ್ಷೆ ಪದ್ಮ ಪ್ರಿಯ ಮೇಲ್ತೋಟ ರವರು ಧ್ವಜಾರೋಹಣ ನೆರವೇರಿಸಿದರು. ಪಿ.ಡಿ.ಒ ದಯಾನಂದ ಪತ್ತುಕುಂಜ ಸ್ವಾಗತಿಸಿದರು.ಈ ಸಂದರ್ಭದಲ್ಲಿ
ನಿವೃತ್ತ ಸೈನಿಕ ಗಂಗಾಧರ ಬಾಕ್ಲಾಡಿ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಪಂಚಾಯತ್ ಸರ್ವ ಸದಸ್ಯರು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು , ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮದ ಗ್ರಾಮಸ್ಥರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗದವರು ಭಾಗವಹಿಸಿದರು. ಜನಾರ್ದನ ಪೈಲೂರು ಕಾರ್ಯಕ್ರಮ ನಿರೂಪಿಸಿದರು.