ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ76ನೇ ಸ್ವಾತಂತ್ರ‍್ಯೋತ್ಸವ ಆಚರಣೆ

0

ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ 76ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಜಾಲ್ಸೂರು ಗ್ರಾ.ಪಂ.ಸದಸ್ಯೆ ಶ್ರೀಮತಿ ಅಂಬಿಕಾ ಧ್ವಜಾರೋಹಣ ನೆರವೇರಿಸಿದರು.
ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ತಂಗಮ್ಮರವರು ಸ್ವಾತಂತ್ರ‍್ಯೋತ್ಸವದ ಮಹತ್ವ ಮತ್ತು ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ನಾಯ್ಕ ಸೋಣಂಗೇರಿ, ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕುಕ್ಕಂದೂರು, ಮಾಜಿ ಉಪಾಧ್ಯಕ್ಷೆ ಶ್ರೀಮತಿ ಸುಮಂಗಲಿ, ಸಾಮಾಜಿಕ ಹೋರಾಟಗಾರ ಸತ್ಯ ಶಾಂತಿ ತ್ಯಾಗ ಮೂರ್ತಿ ಕುಕ್ಕಂದೂರು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ, ಆಶಾ ಕಾರ್ಯಕರ್ತೆ ಅನಿತಾ ಕುಕ್ಕಂದೂರು, ಸಹಾಯಕಿ ಅನೀಸ್ ಮತ್ತು ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರು, ಸದಸ್ಯರುಗಳು ಹಾಗೂ ಮಕ್ಕಳು ಮತ್ತು ಪೋಷಕರು ಹಾಗೂ ಊರ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸತ್ಯ ಶಾಂತಿ ತ್ಯಾಗ ಮೂರ್ತಿ ನಿರೂಪಿಸಿ, ಶ್ರೀಮತಿ ಮಲ್ಲಿಕಾ ಕುಕ್ಕಂದೂರು ವಂದಿಸಿದರು.