ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಆ.15 ರಂದು 77 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಳ್ಯದ ಪ್ರತಿಭಾ ವಿದ್ಯಾಲಯದ ಪ್ರಾಂಶುಪಾಲರಾದ ವೆಂಕಟರಾಮ ಭಟ್ ಧ್ವಜಾರೋಹಣ ಮಾಡಿ ಸ್ವಾತಂತ್ರೋತ್ಸವದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಟ್ರಸ್ಟಿ ಆಗಿರುವ ಚೇತನ್ , ಪೋಷಕ ಪ್ರತಿನಿಧಿಗಳಾದ ಶುಷಾನ್ ಹಾಗೂ ರಾಘವೇಂದ್ರ ಮತ್ತು ಸಂಸ್ಥೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ. ಜಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳಿಗೆ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ‍್ಯ ಹೋರಾಟಗಾರರ ಛದ್ಮವೇಷ ದಲ್ಲಿ ಕಂಗೊಳಿಸಿದರು. ಬಳಿಕ ಶಾಲಾ ಪುಟಾಣಿಗಳು ಜೈ ಹೋ ನೃತ್ಯಕ್ಕೆ ಹೆಜ್ಜೆ ಹಾಕಿದರು. ಸಂಸ್ಥೆಯ ಅಧ್ಯಕ್ಷರಾದ ಶುಭಕರ ಬಿ.ಸಿ ಇವರು ಕಾರ್ಯಕ್ರಮಕ್ಕೆ ಕೋರಿದರು. ಶಿಕ್ಷಕಿ ಶ್ರೀಮತಿ ನಿರ್ಮಲ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ವಿತರಣೆ ಮಾಡಲಾಯಿತು.