ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ’ಸೋಜಾ ಧ್ವಜಾರೋಹಣ ನೆರವೇರಿಸಿ, ಸಭಾಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಸ್ವಯಂ ಶಿಸ್ತು, ಪರಸ್ಪರ ಗೌರವಿಸುವುದು, ದೇಶಾಭಿಮಾನವನ್ನು ಜೀವನದಲ್ಲಿ ರೂಡಿಸಿಕೊಳ್ಳುವುದು , ಹಾಗೂ ಸಂವಿಧಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು.

ನಿವೃತ್ತ ಯೋಧರಾದ ಚಾರ್ಲ್ಸ್ ಹೆರಾಲ್ಡ್ ಡಿ’ಸೋಜಾ ಇವರು ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿ, ಸ್ವಾತಂತ್ರೋತ್ಸವದ ಬಗ್ಗೆ ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಸುಳ್ಯ ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರ ಕ್ರಾಸ್ತಾ, ಪ್ರೌಢಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಗುರು ಬೀರಮಂಗಲ, ಪ್ರಾಥಮಿಕ ಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಜೆ.ಕೆ .ರೈ ಪೂರ್ವ ಪ್ರಾಥಮಿಕ ಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಭವ್ಯಾ,

ಸೈಂಟ್ ಬ್ರಿಜಿದ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ನವೀನ್ ಮಚಾದೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ತರಗತಿವಾರು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು .ವಿಜೇತರಿಗೆ ವೇದಿಕೆಯಲ್ಲಿದ್ದ ಅತಿಥಿಗಳು ಬಹುಮಾನಗಳನ್ನು ನೀಡಿ ಗೌರವಿಸಿದರು.

ವಿದ್ಯಾರ್ಥಿಗಳಿಂದ ವೈವಿದ್ಯಮಯ ಕಾರ್ಯಕ್ರಮಗಳು ಬಹಳ ಅಚ್ಚುಕಟ್ಟಾಗಿ ಮೂಡಿ ಬಂತು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಸ್ವಾಗತಿಸಿ, ಸಹ ಶಿಕ್ಷಕಿ ಸವಿತಾ ಕುತ್ತಿಮುಂಡ ವಂದಿಸಿ, ಹೃತಿಕ 9ನೇ ಹಾಗೂ ನಿಷ್ಕ ಡಿ’ಸೋಜಾ 9 ನೇ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.