ಆಲೆಟ್ಟಿ ಗ್ರಾಮದ ಅರಂಬೂರು ಇಡ್ಯಡ್ಕ ನಿವಾಸಿ ಮಾಧವ ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶ್ರೀಮತಿ ಚೋಮು, ಪುತ್ರರಾದ ಸುಂದರ, ಬಾಬು,ಲಕ್ಷ್ಮಣ, ಪುತ್ರಿಯರಾದ ಪವಿತ್ರ, ಆಲೆಟ್ಟಿ ಪಂಚಾಯತ್ ಸದಸ್ಯೆ ಅನಿತಾ ಹಾಗೂ ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.