ಸರಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ. ಎಂ.ಸಿ ಅಧ್ಯಕ್ಷರಾದ ಆನಂದ ಬಾಣೂರು ರವರು ನೆರವೇರಿಸಿ ಶುಭಹಾರೈಸಿದರು.
ನಂತರ ವಿದ್ಯಾರ್ಥಿಗಳು, ಪೋಷಕರು, ಎಸ್‌ಡಿಎಂಸಿಯವರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಶಿಕ್ಷಕರು, ಊರವರು, ಘೋಷಣೆಗಳೊಂದಿಗೆ ಮರ್ಕಂಜ ಪರಿಸರದಲ್ಲಿ ಮೆರವಣಿಗೆಯನ್ನು ನಡೆಸಿದರು. ತದನಂತರ ಎಡಿಎಂಸಿ ಅಧ್ಯಕ್ಷರಾದ ಆನಂದ ಬಾಣೂರು ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ ಹಾಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಮಾಜ ವಿಜ್ಞಾನ ಶಿಕ್ಷಕಿ ರುಕ್ಮಿಣಿ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪವಿತ್ರ ಗುಂಡಿ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ ,ಮುಖ್ಯ ಶಿಕ್ಷಕಿ ವೀಣಾ ಎಂ.ಟಿ ,ಎಸ್‌ಡಿ ಎಂಸಿ ಸದಸ್ಯರುಗಳಾದ ಗೋವಿಂದ ರಾಜ್ ಬಳ್ಳಕಾನ ,ನಿತ್ಯಾನಂದ ಭೀಮಗುಳಿ, ಅನಿತಾ ಕಂಜಿಪಿಲಿ ,ಕಾರ್ಯಪ್ಪ ಕಂಜಿಪಿಲಿ ,ಶಾಲಾ ವಿದ್ಯಾರ್ಥಿ ನಾಯಕ ದರ್ಶನ್ ಬಿ ಉಪಸ್ಥಿತರಿದ್ದು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು .
ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಮೋಕ್ಷಿತ್ ಪಿ ವಿ ಸ್ವಾಗತಿಸಿ ಪ್ರಾಪ್ತಿಎಂ.ಡಿ ವಂದಿಸಿದರು ಶಿಷ್ಮಾ ಡಿ.ಎಲ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಮರ್ಕಂಜಗ್ರಾಮ ಪಂಚಾಯತ್ ವತಿಯಿಂದ ನೀಡಿದ ಸಿಹಿ ತಿಂಡಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.