ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

0

ಮನಸೂರೆಗೊಂಡ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆ. 15 ರಂದು ನಡೆಯಿತು.

ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕ ಈರಯ್ಯ ದುಂತೂರು ಹಾಗೂ ಸಂಪಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕ್ಯನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ರಂಗಮಯೂರಿ ಕಲಾ ಶಾಲೆಯ ಶಾಸ್ತ್ರೀಯ ಸಂಗೀತ ಗುರುಗಳಾದ ಮಹಾಬಲೇಶ್ವರ ಬಿರ್ಮುಕಜೆ,
ಸುಗಮ ಸಂಗೀತ ಗುರುಗಳಾದ ಶ್ರೀಮತಿ ಸುಮನಾ ರಾವ್,

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ರಾಹುಲ್ ಎಸ್. ರಾವ್ ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಸುನಂದ ಸ್ವಾಗತಿಸಿ, ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲ್ ವಂದಿಸಿದರು.

ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಪ್ರಕಾರದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು.