ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಚಿನ್ ಬಳ್ಳಡ್ಕ ಧ್ವಜಾರೋಹಣ ನಡೆಸಿದರು.
ನಂತರ ಸಭಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಚಿನ್ ಬಳ್ಳಡ್ಕ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪಿ.ಸಿ ಜಯರಾಮ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಉಷಾ ಜಯರಾಮ್, ಗ್ರಾಮ ಪಂಚಾಯತಿ ಸದಸ್ಯ ಜಯರಾಮ ಹಾಡಿಕಲ್ಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿ ಪ್ರಸಾದ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಮಾಧವ ಶೀರಡ್ಕ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ ಹಾಗೂ ಶಾಲೆಯ ಎಲ್ಲಾ ಪೋಷಕರು,
ವಿದ್ಯಾರ್ಥಿಗಳು ಮತ್ತು ಊರಿನ ಗ್ರಾಮಸ್ಥರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ ಮಾಜಿ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಕೊಡುಗೈ ದಾನಿಗಳು ಮಾಧವ ಶೀರಡ್ಕ ಇವರನ್ನು ಸನ್ಮಾನಿಸಲಾಯಿತು.
2022-23 ನೇ ಸಾಲಿನಲ್ಲಿ ಹೆಚ್ಚು ಅಂಕ ಪಡೆದ 7 ನೇ ತರಗತಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯಲ್ಲಿ
ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಕೂಡ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಜಗದೀಶ್ ಎನ್.ಎಂ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು.
ಶಿಕ್ಷಕಿ ಶ್ರೀಮತಿ ಶಾಲಿನಿ ಸ್ವಾಗತಿಸಿದರು,
ಶಿಕ್ಷಕಿ ಶ್ರೀಮತಿ ಸವಿತಾ ವಂದಿಸಿದರು,
ಶಿಕ್ಷಕ ರಂಜಿತ್ ಕಾರ್ಯಕ್ರಮವನ್ನು ನಿರೂಪಿಸಿದರು.