ತೊಡಿಕಾನ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ‌ – ಸನ್ಮಾನ

0

ತೊಡಿಕಾನ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಆ. 15 ರಂದು ನಡೆಯಿತು.
ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಜಿ ಪಂಜಿಕೋಡಿ ಧ್ವಜಾರೋಹಣ ಮಾಡಿದರು.

ಬಳಿಕ ಚೆಂಡೆ ವಾದನದ ಜೊತೆಗೆ ತೊಡಿಕಾನ ಮಲ್ಲಿಕಾರ್ಜುನ ದೇವಾಲಯದ ತನಕ ಮಕ್ಕಳು , ಊರವರು ಮೆರವಣಿಗೆ ನಡೆಸಿದರು.

ಬಳಿಕ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನವೀನ್ ಎ .ಬಿ ವಹಿಸಿದ್ದರು. ಶಾಲೆಯಲ್ಲಿ ಈ ಹಿಂದೆ 5 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ತಿಮ್ಮಯ್ಯ ಮೆತ್ತಡ್ಕ ಇವರನ್ನು ಸನ್ಮಾನಿಸಲಾಯಿತು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಸೌಮ್ಯ ಭಟ್ , ಶಾಲಾ ಮುಖ್ಯ ಶಿಕ್ಷಕ ಅರುಣ್ ಕುಮಾರ್ ವೇದಿಕೆಯಲ್ಲಿದ್ದರು.

ಶಾಲಾ ಸಹಶಿಕ್ಷಕರು , ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಪೋಷಕರು ಭಾಗವಹಿಸಿದ್ದರು.