ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆಟಿ ಆಚರಣೆ ಉತ್ಸವ’ಆಟಿ ಅಖೇರಿ,’ ಕಾರ್ಯಕ್ರಮ ಆಗಸ್ಟ್ 16ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ ಶ್ರೀಮತಿ ಚಂದ್ರಾವತಿ ಬಡ್ಡಡ್ಕರ ವರು ,ಆಟಿ ಆಚರಣೆಯ ಮಹತ್ವ ಮತ್ತು ಆಹಾರ ಪದ್ಧತಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ದ. ಕ. ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯ ನಿವೃತ್ತ ಸಿಬ್ಬಂದಿ ಶ್ರೀಮತಿ ಹೇಮ ಪ್ರಭ ಮತ್ತು ತಂಡದಿಂದ ಆಟಿ ಕಳಂಜ ಪಾಡ್ಧನ ಮತ್ತು ನರ್ತನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿದ್ಯಾರ್ಥಿನಿ ಸಹಲ ಸ್ವಾಗತಿಸಿ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ. ಧನ್ಯವಾದ ಗೈದರು. ವಿದ್ಯಾರ್ಥಿನಿಯರಾದ ಕುಮಾರಿ ಚಂದನ ಮತ್ತು ಕುಮಾರಿ ಭಾಗ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ಆಟಿ ತಿಂಗಳ ವಿಶೇಷ ಖಾದ್ಯಗಳ ಮತ್ತು ಹಳೆಯ ವಸ್ತುಗಳ ಪ್ರದರ್ಶನ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮತ್ತು ನಿರ್ದೇಶಕರುಗಳು ಪ್ರದರ್ಶನ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು.