ಸುಳ್ಯ ಡಿಗ್ರಿ ಕಾಲೇಜಿನ ಉಪನ್ಯಾಸಕರುಗಳಿಗೆ ವರ್ಗ

0


ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಕೊಡಿಯಾಲಬೈಲು ಇಲ್ಲಿನ ಮೂರು ಜನ ಉಪನ್ಯಾಸಕರುಗಳು ವರ್ಗಾವಣೆಗೊಂಡಿದ್ದಾರೆ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಡಿ ಹಾಗೂ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಗಾಯತ್ರಿ ಪಿ ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ತಾಲೂಕು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ರಾಶಿ ಎಂ ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹುಣಸೂರು ಇಲ್ಲಿಗೆ ವರ್ಗಾವಣೆಗೊಂಡಿರುತ್ತಾರೆ.