ಎಡಮಂಗಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ರಾಮಣ್ಣ ಜಾಲ್ತಾರು, ಉಪಾಧ್ಯಕ್ಷ ಸ್ಥಾನಕ್ಕೆ ದಿವ್ಯ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಸಂಭವ

0

ಎಡಮಂಗಲ ಗ್ರಾ.ಪಂ.ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಡಮಂಗಲ ಗ್ರಾಮದ ರಾಮಣ್ಣ ಜಾಲ್ತಾರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಣ್ಮೂರು ಗ್ರಾಮದ ದಿವ್ಯ ಯೋಗಾನಂದ ನಾಮಪತ್ರ ಸಲ್ಲಿಸಿದ್ದಾರೆ. ಎರಡೂ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳು ಅವಿರೋಧ ಆಯ್ಕೆಯಾಗಲಿದೆ. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ತಾ.ಪಂ. ಸದಸ್ಯೆ ಶ್ರೀಮತಿ ಸುಭದಾ ಎಸ್. ರೈ, ಪಂಚಾಯತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.